ಡಾ.ಮನಮೋಹನ್ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್, ಸೋನಿಯಾ ಗಾಂಧಿ, ಖರ್ಗೆ
ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಹುಲ್ ಗಾಂಧಿ ಕಂಬನಿ ಮಿಡಿದಿದ್ದರು. ನನ್ನ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇನೆ ಎಂದು ನೋವಿನಿಂದ ನುಡಿದಿದ್ದರು.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಬೆಳಗಾವಿಗೆ ರಾಹುಲ್ ಆಗಮಿಸಿದ್ದರು. ಈ ಹೊತ್ತಿನಲ್ಲೇ ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಕಂಬನಿ ಮಿಡಿದಿದ್ದರು.