ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಶಿಫಾರಸು

ಬುಧವಾರ, 31 ಮೇ 2017 (13:44 IST)
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸುವಂತೆ ಕೇಂದ್ರ ಸರಕಾರಕ್ಕೆ  ರಾಜಸ್ಥಾನದ ಹೈಕೋರ್ಟ್ ಶಿಫಾರಸ್ಸು ಮಾಡಿದೆ.
ಗೋಹತ್ಯೆ ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೇಂದ್ರ ಸರಕಾರ ಕಾನೂನು ಜಾರಿಗೊಳಿಸಲಿ ಎಂದು ಸಲಹೆ ನೀಡಿದೆ. 
 
ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಹಲವು ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಗೋಹತ್ಯೆ ಕುರಿತಂತೆ ಕಠಿಣ ನೀತಿಗಳನ್ನು ಜಾರಿಗೊಳಿಸುವಂತೆ ಶಿಫಾರಸು ಮಾಡಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ