ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ನಿಧನ

ಮಂಗಳವಾರ, 25 ಜೂನ್ 2019 (11:49 IST)
ಜೈಪುರ : ರಾಜಸ್ಥಾನದ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಸೈನಿ ಸೋಮವಾರ ದಿಲ್ಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.




ಇವರಿಗೆ 75 ವರ್ಷ ವಯಸ್ಸಾಗಿದ್ದು, ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದ ಅವರು ದಿಲ್ಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪೆಡೆಯುತ್ತಿದ್ದರು. ಆದರೆ ಸೋಮವಾರ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


ಕಳೆದ ವರ್ಷವಷ್ಟೇ ಸೈನಿ ಅವರನ್ನು ರಾಜಸ್ಥಾನದ ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಅವರು ಮಾಜಿ ಶಾಸಕರಾಗಿದ್ದು ಆರೆಸ್ಸೆಸ್ ಕಾರ್ಯಕರ್ತರಾಗಿದ್ದರು. ಬಿಜೆಪಿಯ ಕಿಸಾನ್ ಮೋರ್ಚಾದಲ್ಲಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ