21 ವರ್ಷದ ಯುವತಿ ಮೇಲೆ ಅತ್ಯಾಚಾರ: 70 ವರ್ಷದ ಸ್ವಯಂಘೋಷಿತ ದೇವಮಾನವ ಅರೆಸ್ಟ್

ಗುರುವಾರ, 21 ಸೆಪ್ಟಂಬರ್ 2017 (13:27 IST)
ರಾಜಸ್ಥಾನದ ಸ್ವಯಂಘೋಷಿತ ದೇವಮಾನವ ನಿರಂತರವಾಗಿ ಅತ್ಯಾಚಾರಗೈದಿದ್ದಾನೆ ಎಂದು 21 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.
ಯುವತಿಯ ದೂರಿನ ಮೇರೆಗೆ  ಅಳ್ವಾರ್‌ ಜಿಲ್ಲೆಯ ವಾಸಿಯಾಗಿರುವ 70 ವರ್ಷ ವಯಸ್ಸನಿ ಕುಶಾಲೇಂದ್ರ ಫಲಾಹರಿ ಮಹಾರಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಅಳ್ವಾರ್‌ನಲ್ಲಿ ಆಶ್ರಮ ಹೊಂದಿರುವ ಫಲಾಹರಿ ಮಹಾರಾಜ್, ಕಳೆದ ಆಗಸ್ಟ್ ತಿಂಗಳಲ್ಲಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ  
 
ಚತ್ತೀಸ್‌ಗಢ್ ರಾಜ್ಯದ ಬಿಲಾಸ್‌ಪುರ್ ಜಿಲ್ಲೆಯ ಯುವತಿಯೊಬ್ಬಳು  ಬಾಬಾ ಫಲಹಾರಿ ವಿರುದ್ಧ ದೂರು ದಾಖಲಿಸಿದ್ದಾಳೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪ್ರಕಾಶ್ ತಿಳಿಸಿದ್ದಾರೆ.
 
ಆದರೆ, ಪೊಲೀಸರು ಬಾಬಾನ ಆಶ್ರಮದೊಳಗೆ ಬರುವುದಕ್ಕಿಂತ ಮುಂಚೆಯೇ ಆತ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆಸ್ಪತ್ರೆಯ ಹೊರಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಬಾಬಾ ಗುಣಮುಖನಾಗುವುದಕ್ಕಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ