ಇಂಟರ್‌ನೆಟ್ ಸ್ಥಗಿತಗೊಳಿಸಿದ ರಾಜಸ್ಥಾನ!

ಶನಿವಾರ, 11 ಜೂನ್ 2022 (09:27 IST)
ಜೈಪುರ : ಕೊನೆ ಕ್ಷಣದಲ್ಲಿ ಬಿಜೆಪಿ ತನ್ನ ಶಾಸಕರನ್ನು ಸೆಳೆಯಬಹುದು ಎಂಬ ಭೀತಿಯಿಂದ ರಾಜಸ್ಥಾನ ಸರ್ಕಾರ ಜೈಪುರ ಜಿಲ್ಲೆಯ ಅಮೇರ್ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
 
ಉದಯಪುರದಿಂದ ಹಿಂದಿರುಗಿದ ನಂತರ ಕೆಲ ಕಾಂಗ್ರೆಸ್ ಶಾಸಕರು ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಜೈಪುರದ ಅಮೇರ್ ಪ್ರದೇಶದಲ್ಲಿ ತಂಗಿದ್ದಾರೆ.

ಹೀಗಾಗಿ ಗುರುವಾರ ರಾತ್ರಿ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. 

ಶುಕ್ರವಾರ ಸಂಸತ್ತಿನ ಮೇಲ್ಮನೆಗೆ ಮತದಾನ ನಡೆಯಲಿದೆ. ಹೀಗಾಗಿ ಎಲ್ಲಾ ಕಾಂಗ್ರೆಸ್ ಶಾಸಕರನ್ನು ಅಮೇರ್ ಪ್ರದೇಶದ ಹೋಟೆಲ್ ಲೀಲಾಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಧ್ವನಿ ಕರೆಗಳು ಮತ್ತು ಬ್ರಾಡ್ಬ್ಯಾಂಡ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ