ಲಲಿತ್‌ಮೋದಿ ವಿವಾದ: ವಸುಂಧರಾ ರಾಜೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದ ಕಾಂಗ್ರೆಸ್

ಸೋಮವಾರ, 29 ಜೂನ್ 2015 (12:52 IST)
ಕಳಂಕಿತ ಮಾಜಿ ಐಪಿಎಲ್ ಆಯುಕ್ತ ಲಲಿತ್‌ಮೋದಿ ಪ್ರಕರಣದ ತನಿಖೆ ಸುಗಮವಾಗಲು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.  
 
ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಮತ್ತು ಕೇಂದ್ರ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿ ಮತ್ತು ಆರೆಸ್ಸೆಸ್ ನಾಯಕ ಗೋವಿಂದಾಚಾರ್ಯ ಈಗಾಗಲೇ ಹೇಳಿದ್ದಾರೆ. ತನಿಖೆಯಲ್ಲಿ ನಿರಪರಾಧಿ ಎಂದು ಸಾಬೀತಾದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಯಾರು ತಡೆಯಲಾಗದು ಎಂದು ಸಲಹೆ ನೀಡಿದ್ದಾರೆ. 
 
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡಾ ಉಭಯ ನಾಯಕಿಯರು ರಾಜೀನಾಮೆ ನೀಡುವಂತೆ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕಾನೂನಿನ ಸಲಹೆಗಳನ್ನು ಪಡೆಯುವುದನ್ನು ಬಿಟ್ಟು ನೈತಿಕ ಹೊಣೆಯಿಂದಾಗಿ ರಾಜೇ ಮತ್ತು ಸ್ವರಾಜ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.  
 
ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಆಡ್ವಾಣಿ ಸಾರ್ವಜನಿಕ ಜೀವನದಲ್ಲಿರುವ ನಾಯಕರು ವಿಶ್ವಾಸ ಕಾಪಾಡಿಕೊಳ್ಳುವುದು ಅಗತ್ಯ ಎಂದು ಪರೋಕ್ಷವಾಗಿ ಸುಷ್ಮಾ ಮತ್ತು ರಾಜೇಯವರನ್ನು ಟೀಕಿಸಿದ್ದರು.
 
ಹಣದುರಪಯೋಗ, ಹವಾಲಾ ಹಗರಣ, ಬೆಟ್ಟಿಂಗ್‌ನಲ್ಲಿ ಭಾಗಿಯಾಗಿರುವ ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿಗೆ ನೆರವಾದ ಆರೋಪ ಎದುರಿಸುತ್ತಿರುವ ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ. 
 

ವೆಬ್ದುನಿಯಾವನ್ನು ಓದಿ