ಜಯಲಲಿತಾ ಆರೋಗ್ಯ ವಿಚಾರಿಸಿದ ರಜನೀಕಾಂತ್

ಸೋಮವಾರ, 17 ಅಕ್ಟೋಬರ್ 2016 (09:32 IST)
ಸೂಪರ್ ಸ್ಟಾರ್ ರಜನಿಕಾಂತ್ ಭಾನುವಾರ ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ  ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ. ತಂದೆ- ಮಗಳು ಸುಮಾರು 20 ರಿಂದ 25 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಹಿರಿಯ ಪುತ್ರಿ ಐಶ್ವರ್ಯಾ ಜತೆ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು  ಜಯಾ ಆಪ್ತರ ಜತೆ ಆಕೆಯ ದೇಹಸ್ಥಿತಿ ಕುರಿತು ವಿಚಾರಿಸಿದ್ದಾರೆ.
 
ಜಯಲಲಿತಾ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಜನಿ, ಸಿಎಂ ಶೀಘ್ರ ಚೇತರಿಕೆ ಕಾಣಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. 
 
ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಸೆಪ್ಟೆಂಬರ್ 22ರಂದು ನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಲಂಡನ್‌ನ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 
 
ಏತನ್ಮಧ್ಯೆ ಸಿಂಗಾಪುರ್‌ನ ಎಲಿಜಬೆತ್ ಆಸ್ಪತ್ರೆ ವೈದ್ಯರು ಕೂಡ ಜಯಾ ಅವರನ್ನು ಪರೀಕ್ಷಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಖಚಿತ ಪಡಿಸಲು ಅಪೋಲೋ ಆಸ್ಪತ್ರೆ ವೈದ್ಯರು ನಿರಾಕರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ