ಖಟ್ಟರ್ ಹಿಂದೂ ಸಂಘಟನೆಯಾದ ಹಿಂದೂ ಮಕ್ಕಲ್ ಕಟ್ಟಿ ಸಂಘಟನೆಯ ನಾಯಕ ಅರ್ಜುನ್ ಸಂಪತ್ ಮತ್ತು ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರನ್ನು ರಜನಿಕಾಂತ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭೇಟಿ ಬಳಿಕ ಹೇಳಿಕೆ ನೀಡಿರುವ ಅರ್ಜುನ್ ಸಂಪತ್ ಅವರು, ರಜನಿಕಾಂತ್ ಅವರಿಗೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಪ್ರವೇಶಿಸಿ ತಮಿಳುನಾಡು ರಾಜ್ಯಕ್ಕಾಗಿ ಒಳ್ಳೆಯ ಕೆಲಸಗಳನ್ನು ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ಅವರ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ತಮಿಳುನಾಡು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಏನಾದರೂ ಮಾಡಬೇಕೆಂಬ ಆಸೆ ಅವರ ಮನಸ್ಸಿನಲ್ಲಿದೆ ಎಂದು ತಿಳಿಸಿದ್ದಾರೆ.