ಮಧ್ಯಾಹ್ನ 12.15ಕ್ಕೆ ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣವಚನ ಸ್ವೀಕರಿಸಲಿದ್ದು, ಸಂಸತ್ ನ ಸೆಂಟ್ರಲ್ ಹಾಲ್ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್, ಕೋವಿಂದ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸೆಂಟ್ರಲ್ ಹಾಲ್ನಲ್ಲಿ ರಾಜ್ಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಜೆಎಸ್ ಖೆಹರ್, ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸಚಿವ ಸಂಪುಟದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ರಾಜತಾಂತ್ರಿಕ ಮುಖ್ಯಸ್ಥರು, ಸಂಸತ್ ಸದಸ್ಯರು, ಸಚಿವಾಲಯದ ಉನ್ನತಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.