ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರ; ಫಾರೂಖ್ ಅಬ್ದುಲ್ಲಾ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಗಿರಿರಾಜ್

ಭಾನುವಾರ, 9 ಡಿಸೆಂಬರ್ 2018 (14:20 IST)
ನವದೆಹಲಿ : ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮಂದಿರವನ್ನು ಎಲ್ಲಿ ಬೇಕಾದರೂ ಕಟ್ಟಬಹುದು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಗಿರಿರಾಜ್ ಅವರು ಫಾರೂಖ್ ಅಬ್ದುಲ್ಲಾ ಹಜ್ ನ್ನು ಬಿಟ್ಟು ಬೇರೆಲ್ಲಿಗಾದರೂ ಹೋಗಬಹುದೇ ಎಂದು ಕೇಳುತ್ತೇನೆ ಎಂದು ಹೇಳಿದ್ದಾರೆ.


ಮೀರತ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಿರಿರಾಜ್ ಸಿಂಗ್, ಸರ್ಕಾರದ ಹಂಗಿನಲ್ಲಿ ರಾಮಮಂದಿರ ನಿರ್ಮಿಸುವುದಿಲ್ಲ, ಬದಲಿಗೆ ನೂರು ಕೋಟಿ ಹಿಂದುಗಳ ಎದೆಗಾರಿಕೆಯ ಬೆಂಬಲದೊಂದಿಗೆ ರಾಮಮಂದಿರ ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.


ಅಯೋಧ್ಯೆಯಲ್ಲಿ ಭೂಮಿಯನ್ನು ಎರಡು ಬಾರಿ ಅಗೆಯಲಾಯಿತು. ಆದರೆ ಯಾರೊಬ್ಬರೂ ಆ ಬಗ್ಗೆ ಮಾತನಾಡಲಿಲ್ಲ. ಈಗ ಮತ್ತೆ ರಾಮಮಂದಿರವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ