ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ- ರಾಮ್ ಗೋಪಾಲ್ ಯಾದವ್ ರಿಂದ ವಿವಾದಾತ್ಮಕ ಹೇಳಿಕೆ

ಶುಕ್ರವಾರ, 22 ಮಾರ್ಚ್ 2019 (09:06 IST)
ಲಕ್ನೋ : ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಜಮ್ಮು ಮತ್ತು ಶ್ರೀನಗರ ಮಧ್ಯೆ ಯಾವುದೇ ತಪಾಸಣೆ ನಡೆಯಲಿಲ್ಲ. ಜೊತೆಗೆ ಯೋಧರು ಸಾಮಾನ್ಯ ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದರು. ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದು ಹೇಳಿದ್ದಾರೆ.


ಪುಲ್ವಾಮಾ ದಾಳಿಯಲ್ಲಿ ಪಿತೂರಿ ನಡೆದಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ತನಿಖೆಗೆ ನೀಡಲು ಸಾಧ್ಯವಾಗುತ್ತದೆ. ತನಿಖೆಯ ಬಳಿಕ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರು ಹೊರಬೀಳುತ್ತವೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ