ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೆಟ್ಟು ನಿಂತಿದ್ದಕ್ಕೆ ಕೇಂದ್ರ ಸರ್ಕಾರದ ಕಾಲೆಳೆದ ರಮ್ಯಾ
ಭಾನುವಾರ, 17 ಫೆಬ್ರವರಿ 2019 (09:20 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದ ದೇಶದ ಮೊದಲ ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಕೆಟ್ಟು ನಿಂತಿರುವುದಕ್ಕೆಕಾಂಗ್ರೆಸ್ ನಾಯಕಿ ರಮ್ಯಾ ಅವರು ಕೇಂದ್ರಸರ್ಕಾರದ ಕಾಲೆಳೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದ್ದ ದೇಶದ ಮೊದಲ ಹೈ-ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಕೆಟ್ಟು ನಿಂತಿದೆ.
ಈ ಸುದ್ಧಿ ತಿಳಿದು ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯಾ, ಪುಲ್ವಾಮಾ ದಾಳಿಗೆ ಪಿಯೂಷ್ ಘೋಯಲ್ ಉತ್ತರ ಇದೆ ಇರಬಹುದು ಎಂದು ವ್ಯಂಗ್ಯವಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.