ವೀಡಿಯೋ ತೋರಿಸ್ತೀನಿ ಎಂದು 7ರ ಬಾಲಕಿಯ ಮೇಲೆ ರೇಪ್!

ಗುರುವಾರ, 11 ಮೇ 2023 (16:53 IST)
ರಾಂಚಿ : 7 ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್ದಲ್ಲಿ ನಡೆದಿದೆ.

ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆರೋಪಿಯು ಹಾಲು ಸರಬರಾಜು ಮಾಡಲು ಬಾಲಕಿಯ ಮನಗೆ ಬಂದಿದ್ದ. ಈ ವೇಳೆ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ್ದಾನೆ.

ಅದಾದ ಬಳಿಕ ಆತ ಬಾಲಕಿಗೆ ಮೊಬೈಲ್ನಲ್ಲಿ ವೀಡಿಯೋವನ್ನು ತೋರಿಸುವುದಾಗಿ ಆಮಿಷವೊಡ್ಡಿದ್ದಾನೆ. ಅಲ್ಲಿಂದ ಆಕೆಯನ್ನು ಪಕ್ಕದಲ್ಲೇ ಇದ್ದ ನಿರ್ಮಾಣ ಹಂತದ ಮನೆಗೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. 

ಘಟನೆಗೆ ಸಂಬಂಧಿಸಿ ಬಾಲಕಿಯ ಪೋಷಕರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು 40 ವರ್ಷದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ