ಯುವತಿ ಮೇಲೆ ಅತ್ಯಾಚಾರವೆಸಗಿ ಚಿನ್ನಾಭರಣ ಕದ್ದು ಪರಾರಿ!
32 ವರ್ಷದ ಯುವತಿಯೊಬ್ಬಳು ತನ್ನ ಸಹೋದರನೊಂದಿಗೆ ಗ್ರಾಮಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಳು. ಈ ವೇಳೆ ಐವರ ಗುಂಪೊಂದು ತಡೆದಿದ್ದಾರೆ. ನಂತರ ಯುವತಿ ಬಳಿಯಿದ್ದ ಚಿನ್ನಾಭರಣ, ಮೊಬೈಲ್ ಹಾಗೂ ನಗದುಗಳನ್ನು ದೋಚಿದ್ದಾರೆ.
ಅಷ್ಟೇ ಅಲ್ಲದೇ ಆರೋಪಿಗಳು ಸಂತ್ರಸ್ತೆಯ ಸಹೋದರನಿಗೆ ತೀವ್ರವಾಗಿ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಪ್ರಜ್ಞೆ ತಪ್ಪಿದ್ದಾನೆ. ಅದಾದ ಬಳಿಕ ಆ ಗುಂಪು ಯುವತಿಯನ್ನು ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಯ ಮೇಲೆ ಓರ್ವ ವ್ಯಕ್ತಿ ಅತ್ಯಾಚಾರವೆಸಗಿದ್ದಾನೆ.