ನವದೆಹಲಿ: ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬಳು ಆರೋಪಿಗಳ ಕಿರುಕುಳದಿಂದಾಗಿ ತನ್ನ 7 ತಿಂಗಳ ಮಗುವಿನೊಂದಿಗೆ ಜೀವಕೊನೆಗಾಣಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.
ಮಹಿಳೆ ಕೆಲವು ತಿಂಗಳ ಹಿಂದೆ ತನ್ನ ತಂದೆಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಳು. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಈ ನಡುವೆ ತಂದೆ ಮತ್ತು ಸಂಬಂಧಿಕರೇ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಆಕೆ ಜೀವಕೊನೆಗಾಣಿಸಿದ್ದಾಳೆ.