ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ.
ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ.
ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ.ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥೆಯನ್ನು ಆರೋಪಿ ಮದುವೆಯಾಗಿದ್ದರೂ ಕೂಡ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.
ವಿಜಯಪುರದ ಬಸವನ ಬಾಗೇವಾಡಿಯ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ, ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ಥೆ ರಾಜಿಯಾದ ಮಾತ್ರಕ್ಕೆ ಕೇಸ್ ರದ್ದು ಮಾಡಲು ಸಾಧ್ಯವಿಲ್ಲ. ಪ್ರಕರಣ ರದ್ದು ಮಾಡಿದರೆ ಸಮಾಜದ ಮೇಲೆ ಪರಿಣಾಮ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ. ಅಪ್ರಾಪ್ತೆಯನ್ನು ಪ್ರೀತಿಸಿದ್ದ ಆರೋಪಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದು, ಅತ್ಯಾಚಾರ ಎಸಗಿದ್ದ. ಬಾಲಕಿ ಗರ್ಭಿಣಿಯಾದ ನಂತರ ಆಕೆಯನ್ನು ಅಪಹರಿಸಿದ್ದ.
ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಆರೋಪಿ ಮತ್ತು ಸಂತ್ರಸ್ಥೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಮದುವೆಯಾಗಿ ಒಂದು ಮಗುವಿದೆ. ಈ ಪ್ರಕರಣ ರದ್ದುಪಡಿಸಿ ಇಬ್ಬರೂ ಒಟ್ಟಿಗೆ ಬಾಳಲು ಅವಕಾಶ ಕಲ್ಪಿಸಬೇಕೆಂದು ಅರ್ಜಿದಾರರ ಪರ ವಕೀಲರು ಕೋರಿದ್ದರು.