ಅತ್ಯಾಚಾರ: ಜೀವಾವಧಿ ಶಿಕ್ಷೆ ಪಡೆದ ಆ ಸಚಿವ ಯಾರು?

ಶನಿವಾರ, 13 ನವೆಂಬರ್ 2021 (12:34 IST)
ಲಕ್ನೋ : ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್  ಪ್ರಜಾಪತಿ ಹಾಗೂ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ಉತ್ತರಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 2 ಲಕ್ಷ ರೂ. ದಂಡ ವಿಧಿಸಲಾಗಿದೆ. ಲಕ್ನೋ ವಿಶೇಷ ಕೋರ್ಟ್‌ನಿಂದ ಗಾಯತ್ರಿ ಪ್ರಜಾಪತಿ ಅವರಿಗೆ ಜೈಲು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ನಿನ್ನೆ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿದ್ದ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಚಿತ್ರಕೂಟದ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಮಗಳ ಮೇಲೂ ಅತ್ಯಾಚಾರ ನಡೆಸಲು ಯತ್ನಿಸಿದ್ದರಿಂದ 2017ರಲ್ಲಿ ಗಾಯತ್ರಿ ಪ್ರಜಾಪತಿಯನ್ನು ಬಂಧಿಸಲಾಗಿತ್ತು.
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮತ್ತು ಇತರ ಇಬ್ಬರಿಗೆ ಲಕ್ನೋದ ವಿಶೇಷ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಅಖಿಲೇಶ್ ಯಾದವ್ ಅವರ ಕ್ಯಾಬಿನೆಟ್ನ ಪ್ರಮುಖ ಸದಸ್ಯ, ಸಾರಿಗೆ ಮತ್ತು ಗಣಿಗಾರಿಕೆ ಸಚಿವಾಲಯಗಳ ಖಾತೆಗಳನ್ನು ಹೊಂದಿದ್ದ ಪ್ರಜಾಪತಿಯನ್ನು ಮಾರ್ಚ್ 2017ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಮತ್ತು ಆಕೆಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ