28 ವರ್ಷ ವಯಸ್ಸಿನ ಆರೋಪಿ ಮದನ್ ಅರಿವಲಗಮ್, ಮನೆಯಲ್ಲಿ ಮಹಿಳೆಯರು ಏಕಾಂಗಿಯಾಗಿದ್ದಾಗ ಮನೆಗೆ ನುಗ್ಗಿ ಅವರನ್ನು ಬೆದರಿಸಿ ಅತ್ಯಾಚಾರವೆಸಗುತ್ತಿದ್ದ. ಅತ್ಯಾಚಾರವೆಸಗುವ ವಿಡಿಯೋ ತೆಗೆದು ಹಣ ನೀಡದಿದ್ದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವ ಬೆದರಿಕೆಯೊಡ್ಡುತ್ತಿದ್ದ ಎಂದ ಪೊಲೀಸ್ ಮೂಲಗಳು ತಿಳಿಸಿವೆ.
ಅತ್ಯಾಚಾರಕ್ಕೊಳಗಾದ ಮಹಿಳೆಯರು, ಯುವತಿಯರು ಮರ್ಯಾದೆಗೆ ಹೆದರಿ ಪೊಲೀಸರಿಗೆ ದೂರು ನೀಡುತ್ತಿರಲಿಲ್ಲ. ಇದರಿಂದ ಮತ್ತಷ್ಟು ಉತ್ತೇಜಿತಗೊಂಡ ಆರೋಪಿ ಮದನ್, ಅತ್ಯಾಚಾರ ಮಾಡುವುದನ್ನೇ ಕಾಯಕವಾಗಿಸಿಕೊಂಡಿದ್ದ.
ಆದರೆ, ಆರೋಪಿ ಮದನ್ ದುರಾದೃಷ್ಟ ಹೆಗಲೇರಿತ್ತು. ಸಾಫ್ಟ್‌ವೇರ್ ಇಂಜಿನಿಯರ್‌ರೊಬ್ಬರು ಒಬ್ಬ ವ್ಯಕ್ತಿ ತಮ್ಮಿಂದ 8500 ರೂಪಾಯಿ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ ಎಂದು ದೂರು ನೀಡಿದ್ದರು. ದೂರಿನ ತನಿಖೆ ನಡೆಸಿದಾಗ ಸಿಸಿಟಿವಿ ಆಧಾರದ ಮೇಲೆ ಆರೋಪಿ ಮದನ್‌ನನ್ನು ವಶಕ್ಕೆ ತೆಗೆದುಕೊಂಡಿದ್ದರು.