ಇಂದು ರಾವತ್ ಚಿತಾಭಸ್ಮ ವಿಸರ್ಜನೆ
ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಸಿಡಿಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಚಿತಾ ಭಸ್ಮವನ್ನು ಇಂದು ಅವರ ಕುಟುಂಬದವರು ಹರಿದ್ವಾರಕ್ಕೆ ಕೊಂಡೊಯ್ದು ಅಲ್ಲಿ ವಿಸರ್ಜನೆ ಮಾಡಲಿದ್ದಾರೆ.
ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿತ್ತು. ಅದರಲ್ಲಿ ಪ್ರಯಾಣ ಮಾಡುತ್ತಿದ್ದ ಸಿಡಿಎಸ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ.
ಅವರಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಅಂತ್ಯಕ್ರಿಯೆಯನ್ನು ದೆಹಲಿಯ ಬ್ರಾರ್ ಸ್ಕ್ವೇರ್ನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ. ಈಗ ಇಬ್ಬರ ಚಿತಾಭಸ್ಮವನ್ನೂ ಇಂದು ಬೆಳಗ್ಗೆ 10 ಗಂಟೆ ಹೊತ್ತಿಗೆ ವಿಐಪಿ ಘಾಟ್ನಲ್ಲಿ ವಿಸರ್ಜನೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.