ನವದೆಹಲಿ : ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಕಾರಣಕ್ಕಾಗಿ ಮಹಾರಾಷ್ಟ್ರ ಮೂಲದ ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಪರವಾನಿಗೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರದ್ದು ಪಡಿಸಿದೆ.
ಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಆರ್ಥಿಕವಾಗಿ ದುರ್ಬಲಗೊಂಡಿದ್ದು, ಬಂಡವಾಳ ಮತ್ತು ಗಳಿಕೆ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ. ಹಾಗಾಗಿ ಆರ್ಬಿಐ ಇಂದಿನಿಂದ ಬ್ಯಾಂಕಿನ ವ್ಯವಹಾರವನ್ನು ಸ್ಥಗಿತಗೊಳಿಸಿ ಲೈಸನ್ಸ್ ರದ್ದುಪಡಿಸಿ ಆದೇಶ ಹೊರಡಿಸಿದೆ.
ಬ್ಯಾಂಕ್ ಆರ್ಥಿಕವಾಗಿ ಸಮಸ್ಯೆಯಲ್ಲಿರುವುದರಿಂದಾಗಿ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರಿ ಇಲಾಖೆ ಆಯುಕ್ತ ಮತ್ತು ಸಹಕಾರ ಸಂಘಗಳ ರಿಜಿಸ್ಟ್ರಾರ್ ಆರ್ಬಿಐಗೆ ಪತ್ರಬರೆದಿದ್ದರು. ಆ ಬಳಿಕ ಆರ್ಬಿಐ ಲೈಸನ್ಸ್ ರದ್ದು ಪಡಿಸಿದೆ.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬ್ಯಾಂಕ್ ಠೇವಣಿದಾರರಿಗೆ ಪೂರ್ಣ ಪ್ರಮಾಣದಲ್ಲಿ ವ್ಯವಹಾರವನ್ನು ನಡೆಸಲು ಸಹಕರಿಸಲು ಕಷ್ಟವಾಗಲಿದೆ. ಹಾಗಾಗಿ ಠೇವಣಿದಾರರ ಹಿತಾಸಕ್ತಿಯನ್ನು ಮನಗಂಡು ಈ ನಿರ್ಧಾರವನ್ನು ಆರ್ಬಿಐ ತೆಗೆದುಕೊಂಡಿರುವುದಾಗಿ ತಿಳಿಸಿದೆ.