ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ : ಕೇಂದ್ರ ಸರ್ಕಾರ

ಗುರುವಾರ, 31 ಆಗಸ್ಟ್ 2023 (13:01 IST)
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ನಿರ್ದಿಷ್ಟ ಸಮಯ ನೀಡಲು ಸಾಧ್ಯವಿಲ್ಲ. ಆದರೆ ಕೇಂದ್ರಾಡಳಿತ ಸ್ಥಾನಮಾನವು ತಾತ್ಕಾಲಿಕವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆ ನಡೆಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಕೋರ್ಟ್ಗೆ ತಿಳಿಸಿದೆ. 

ಆರ್ಟಿಕಲ್ 370 ರದ್ದು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾ.ಡಿ.ವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.

ಈ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆಗೆ ಸಿದ್ಧವಿದ್ದೇವೆ. ಒಟ್ಟು ಮೂರು ಚುನಾವಣೆಗಳು ಬಾಕಿ ಇವೆ. ಮೊದಲ ಬಾರಿಗೆ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಮೊದಲು ಪಂಚಾಯತ್ಗಳಿಗೆ ಚುನಾವಣೆ ನಡೆಯಲಿದೆ. ಎರಡನೇಯದಾಗಿ ಪುರಸಭೆ ಚುನಾವಣೆಗಳು ಮತ್ತು ನಂತರ ವಿಧಾನಸಭೆ ಚುನಾವಣೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ