ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿಜೆಪಿ, ಇದೀಗ ಉತ್ತರಪ್ರದೇಶ ರಾಜ್ಯವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದೆ.
ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಮತ್ತು ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.
ಏತನ್ಮಧ್ಯೆ, ಮುಲಾಯಸಿಂಗ್ ಸರಕಾರದಲ್ಲಿ ಸಚಿವರಾಗಿದ್ದ ಸಮಾಜವಾದಿ ಪಕ್ಷದ ಮುಖಂಡ ಜಗದೀಶ್ ರಾಣಾ, ಸಮಾಜವಾದಿ ಪಕ್ಷವನ್ನು ತೊರೆದು ಉತ್ತರಪ್ರದೇಶದ ರಾಜ್ಯಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.