ನವದೆಹಲಿ : ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು.
1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಸಂಪೂರ್ಣ ಹಾನಿಗೊಳಗಾಗಿದ್ದ ಶಾರದಾ ಮಂದಿರವನ್ನು ಆರ್ಟಿಕಲ್ 370 ರದ್ದತಿ ನಂತರ ಪುನರ್ ನಿರ್ಮಾಣಗೊಳಿಸಿ ಯುಗಾದಿಯ ಶುಭ ದಿನದಂದು ಲೋಕಾರ್ಪಣೆಗೊಳಿಸಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ.
ಕರ್ನಾಟಕದ ಬಿಡದಿಯ ಗ್ರಾನೈಟ್ ಬಳಕೆಯಿಂದ ನಿರ್ಮಿತವಾಗಿರುವ ಮಂದಿರದಲ್ಲಿ, ಶೃಂಗೇರಿ ಶಾರದ ಮಠದಿಂದ ಪಂಚಲೋಹದ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದ್ದು ಗಮನಾರ್ಹ. ಜನವರಿ 24 ರಿಂದ ದೇಶಾದ್ಯಂತ ಸಂಚರಿಸಿ ತೀತ್ವಾಲ್ ತಲುಪಿರುವ ಮೂರ್ತಿಯು ಇಂದು ಸ್ಥಾಪನೆಗೊಂಡಿದೆ.