ಈ ಬಾರಿ ದಾಖಲೆಯ ಜಿಎಸ್‌ಟಿ ಸಂಗ್ರಹ

ಮಂಗಳವಾರ, 2 ಮೇ 2023 (12:02 IST)
ನವದೆಹಲಿ : ಈ ಬಾರಿಯ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ 1.87 ಲಕ್ಷ ಕೋಟಿ  ರೂ. ಜಿಎಸ್ಟಿ ಸಂಗ್ರಹವಾಗಿದ್ದು, ದೇಶದಲ್ಲಿ ಜಾರಿಯಾದ ಬಳಿಕ ಇದೇ ಮೊದಲಬಾರಿಗೆ ಅತಿಹೆಚ್ಚು ಜಿಎಸ್ಟಿ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ.
 
ಕಳೆದ ವರ್ಷ ಏಪ್ರಿಲ್ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದ್ದು ಈವರೆಗಿನ ದಾಖಲೆಯಾಗಿತ್ತು. ಆ ನಂತರ ಕಳೆದ ಅಕ್ಟೋಬರ್ನಲ್ಲಿ 1.48 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, 2ನೇ ಬಾರಿಗೆ ಅತಿಹೆಚ್ಚು ಸಂಗ್ರಹವಾದ ಜಿಎಸ್ಟಿ ಪ್ರಮಾಣವಾಗಿತ್ತು. ಆದ್ರೆ 2023ರ ಕಳೆದ ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಇದು ಹಿಂದೆಂಗಿತಲೂ ಅತ್ಯಧಿಕ 19,495 ಕೋಟಿ ರೂ. ಅಂದ್ರೆ ಶೇ.12 ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ. 

ಕಳೆದ ತಿಂಗಳು ಏಪ್ರಿಲ್ 20 ರಂದು ಒಂದೇ ದಿನದಲ್ಲಿ 68,228 ಕೋಟಿ ರೂ. ಸಂಗ್ರಹವಾಗಿದೆ. ಇದು ಈವರೆಗೆ ಒಂದೇ ದಿನದಲ್ಲಿ ಸಂಗ್ರಹವಾದ ಅತಿಹೆಚ್ಚು ಜಿಎಸ್ಟಿ ಪ್ರಮಾಣವಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ