ಕೇರಳದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಭಾನುವಾರ, 17 ಅಕ್ಟೋಬರ್ 2021 (15:59 IST)
ಕೇರಳ (ಅ 17 ) ; ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಭಾರೀ ಮಳೆಯಿಂದಾಗಿ ಶನಿವಾರ 6 ಜನ ಸಾವನ್ನಪ್ಪಿದ್ದಾರೆ ಮತ್ತು 12ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಹಲವು ಭಾಗಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಿದೆ.

ಕೇರಳದ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್ ಮತ್ತು ತ್ರಿಶೂರ್ ಸೇರಿದಂತೆ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಸಿಎಂ ಪಿಣರಾಯಿ ವಿಜಯನ್ ಶನಿವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ ಅಲ್ಲದೆ, ಕೊಟ್ಟಾಯಂ ಸೇರಿದಂತೆ ಪ್ರವಾಹಕ್ಕೆ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ಎಲ್ಲಾ ವಿಧಾನಗಳನ್ನು ಬಳಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ಸುರಕ್ಷತಾ ಕ್ರಮಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅವರು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ