ಗುಜರಾತ್ನಲ್ಲಿ ರೆಡ್ ಅಲರ್ಟ್!

ಶುಕ್ರವಾರ, 15 ಜುಲೈ 2022 (11:58 IST)
ಇಲ್ಲಿನ ಸೂರತ್, ಜುನಾಗಢ್, ಗಿರ್, ಭಾವನಗರ, ತಾಪಿ, ದಂಗ್, ವಲ್ಸಾದ್ ಮತ್ತು ನವಸರ್ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಗುಜರಾತ್ನ ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.
 
ಮಹಾರಾಷ್ಟ್ರದ ಮೋದಕ್ ಸಾಗರ್ ಮತ್ತು ತಾನ್ಸಾ ಎರಡೂ ಅಣೆಕಟ್ಟುಗಳಿಂದ ನೀರು ತುಂಬಿ ಹರಿಯುತ್ತಿರುವುದರಿಂದ ಪೂರ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.

ಆದ್ದರಿಂದ ನದಿ ಪಾತ್ರದ ಜನರು ಜಾಗ್ರತೆ ವಹಿಸುವಂತೆ ಜೊತೆಗೆ ವಹಿಸಬೇಕು, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ