ನವದೆಹಲಿ: ಕೊರೋನಾ ಲಸಿಕೆ ಪಡೆಯಲು 18 ವರ್ಷ ಮೇಲ್ಪಟ್ಟವರು ಇನ್ನು ಮುಂದೆ ಕೊವಿನ್ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕಾಗಿಲ್ಲ.
ಕೊರೋನಾ ಲಸಿಕೆ ಪಡೆಯಲು ಮುಂಚಿತವಾಗಿ ನೋಂದಣಿ ಮಾಡಬೇಕು ಎಂಬ ನಿಯಮವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇನ್ನು ಮುಂದೆ ನೋಂದಣಿ ಕಡ್ಡಾಯವಲ್ಲ.
ಗ್ರಾಮೀಣ ಭಾಗದವರಿಗೆ ನೋಂದಣಿ ಮಾಡುವುದು ಕಷ್ಟವಾಗುತ್ತಿದೆ. ಇದರಿಂದಾಗಿ ಹಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. 18 ವರ್ಷ ಮೇಲ್ಪಟ್ಟವರು ತಮ್ಮ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದು ಸರ್ಕಾರ ಹೇಳಿದೆ.