ನವದೆಹಲಿ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
ಈ ನಡುವೆಯೂ 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ನಿನ್ನೆ ಸಂಜೆಯವರೆಗೆ ಸುಮಾರು 10,000 ಮಹಿಳಾ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಈಗಾಗಲೇ ಮೊದಲ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದೆ. 2ನೇ ಹಂತದಲ್ಲಿ ಅರ್ಜಿಗಳನ್ನು ಸಲ್ಲಿಸಲು ಜುಲೈ 15 ರಿಂದ 30ರ ವರೆಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.
ಅಗ್ನಿಪಥ್ ಯೋಜನೆಯಲ್ಲಿ 3 ಸಾವಿರ ಮಹಿಳೆಯರು ಸೇರಲು ಅವಕಾಶವಿದ್ದು, ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ ಎಂದು ಹೇಳಲಾಗಿದೆ.