ಬೆಂಗಳೂರು : ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.