ರಿಲಯನ್ಸ್ ಉದ್ಯೋಗಿಗಳಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಿರುವ ಅಂಬಾನಿ

ಶುಕ್ರವಾರ, 23 ಏಪ್ರಿಲ್ 2021 (11:16 IST)
ಮುಂಬೈ: ತಮ್ಮ ರಿಲಯನ್ಸ್ ಸಂಸ್ಥೆಯ ಉದ್ಯೋಗಿಗಳಿಗೆ ಉದ್ಯಮಿ ಮುಖೇಶ್ ಅಂಬಾನಿ ಉಚಿತವಾಗಿ ಕೊವಿಡ್ ಲಸಿಕೆ ನೀಡಲು ಮುಂದಾಗಿದ್ದಾರೆ.


ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ ರಿಲಯನ್ಸ್ ಉದ್ಯೋಗಿಗಳಿಗೆ ಮತ್ತು ಅವರ ಕುಟುಂಬಸ್ಥರಿಗೆ ಉಚಿತವಾಗಿ ಲಸಿಕೆ ನೀಡಲು ಅಂಬಾನಿ ನಿರ್ಧರಿಸಿದ್ದಾರೆ.

ತಮ್ಮ ಉದ್ಯೋಗಿಗಳಿಗೆ ಈ ಸಂಬಂಧ ಪತ್ರ ಬರೆದಿರುವ ಅಂಬಾನಿ ಎಲ್ಲರೂ ಈ ಉಚಿತ ಲಸಿಕೆಯ ಪ್ರಯೋಜನ ಪಡೆದು ಕೊರೋನಾದಿಂದ ರಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನೀವು ಮತ್ತು ನಿಮ್ಮ ಕುಟುಂಬದವರ ಸುರಕ್ಷತೆ ನಮಗೆ ಮುಖ್ಯ. ಹೀಗಾಗಿ ಲಸಿಕೆ ಪಡೆದುಕೊಳ್ಳಿ ಎಂದು ಉದ್ಯೋಗಿಗಳಿಗೆ ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ