ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ

ಮಂಗಳವಾರ, 26 ಏಪ್ರಿಲ್ 2022 (11:21 IST)
ಲಕ್ನೋ : ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗುವುದು ಎಂದು ಉತ್ತರ ಪ್ರದೇಶ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಶಬ್ದ ಮಿತಿಯ ಮಾನದಂಡಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು ಎಂದು ತಿಳಿಸಿದೆ.
ಏಪ್ರಿಲ್ 30ರೊಳಗೆ ಅಕ್ರಮವಾಗಿ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುವಂತಹ ಎಲ್ಲಾ ಸ್ಥಳಗಳ ಪಟ್ಟಿಯನ್ನು ಮಾಡಿ ಗೃಹ ಇಲಾಖೆಗೆ ವರದಿಯನ್ನು ಕಳುಹಿಸುವಂತೆ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಲಾಗಿದ್ದು,

ಪ್ರತಿ ಜಿಲ್ಲೆಯ ವಿಭಾಗೀಯ ಆಯುಕ್ತರು ವರದಿಗಳನ್ನು ಕಳುಹಿಸುತ್ತಾರೆ. ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿದ ನಂತರ ಎಲ್ಲಾ ಅಕ್ರಮ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗುವುದು.

ಅನುಮತಿಯೊಂದಿಗೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಹುದು. ಆದರೆ ಆವರಣದಿಂದ ಧ್ವನಿ ಹೊರಬರಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ ಐದು ದಿನಗಳ ನಂತರ ಈ ಆದೇಶ ಬಂದಿದೆ. ಧ್ವನಿವರ್ಧಕಗಳಿಗೆ ಹೊಸ ಪರವಾನಗಿ ನೀಡುವುದಿಲ್ಲ ಎಂದು ಹೇಳಿದ್ದಾರೆ. 

ಈ ಮುನ್ನ ಸುಪ್ರೀಂಕೋರ್ಟ್ನ ಆದೇಶದಂತೆ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಪೊಲೀಸ್ ಮಹಾನಿರೀಕ್ಷಕ ಪ್ರಯಾಗ್ರಾಜ್ ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ