ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ : ಠಾಕ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು.
ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.