ಜಾತಿ ಆಧಾರಿತ ಮೀಸಲಾತಿ ರದ್ದುಗೊಳಿಸಬೇಕು: ರಾಜ್ ಠಾಕ್ರೆ

ಸೋಮವಾರ, 3 ಅಕ್ಟೋಬರ್ 2016 (19:10 IST)
ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸಬೇಕು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.
 
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮಾತ್ರ ಮೀಸಲಾತಿ ನೀಡಬೇಕೇ ಹೊರತು ಜಾತಿ ಆಧಾರಿತ ಮೀಸಲಾತಿ ನೀಡಬಾರದು ಎಂದು ಪ್ರತಿಪಾದಿಸಿದರು. 
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.    
 
ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಜಾತಿ ಆಧಾರಿತ ಮೀಸಲಾತಿಯನ್ನು ಜಾರಿಗೆ ತಂದು ದೇಶಕ್ಕೆ ವಿಷವುಣಿಸಿದ್ದಾರೆ. ಅವರೇ ನಿಜವಾದ ಅಪರಾಧಿ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಏತನ್ಮಧ್ಯೆ, ಮರಾಠಾ ಸಮುದಾಯ ಶಿಸ್ತುಬದ್ಧವಾಗಿ ಪ್ರತಿಭಟನೆ ನಡೆಸುತ್ತಿದೆ. ಇಂತಹ ಶಾಂತಿಯುತ, ಶಿಸ್ತುಬದ್ಧ ಪ್ರತಿಭಟನೆಗಳು ರಾಜ್ಯ ಅಥವಾ ದೇಶದಲ್ಲಿಯೇ ನಡೆದಿಲ್ಲ ಎಂದು ಶ್ಲಾಘಿಸಿದರು.
 
ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಅಧಿಕಾರದಲ್ಲಿದ್ದಾಗ ಯಾಕೆ ಆರ್ಥಿಕ ಆಧಾರಿತ ಮೀಸಲಾತಿ ಜಾರಿಗೆ ತರಲಿಲ್ಲ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ