ದೇಶದ ಮೊದಲ ಲೋಕಪಾಲ್ ಆಗಿ ನಿವೃತ್ತ ನ್ಯಾ. ಪಿ.ಸಿ.ಘೋಷ್ ನೇಮಕ

ಬುಧವಾರ, 20 ಮಾರ್ಚ್ 2019 (08:19 IST)
ನವದೆಹಲಿ : ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟಿನ ನಿವೃತ್ತ ಮುಖ್ಯ ನ್ಯಾಯಾಧೀಶ ಪಿನಾಕಿ ಚಂದ್ರ ಘೋಷ್ ನೇಮಕಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಹಾಗೂ ಹಿರಿಯ ವಕೀಲ ಮುಕುಲ್ ರೋಹತ್ಗಿ ಅವರನ್ನು ಒಳಗೊಂಡ ಆಯ್ಕೆ ಸಮಿತಿಯ ಮುಂದೆ ಪಿ.ಸಿ.ಘೋಷ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಹೀಗಾಗಿ ನೇಮಕ ಮಂಡಳಿ ಅವರನ್ನೇ ಅಂತಿಮಗೊಳಿಸಿ ನೇಮಕ ಮಾಡಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕಕ್ಕೆ ಅಂಕಿತ ಹಾಕಿದ್ದಾರೆ.

 

ನ್ಯಾ.ಪಿ.ಸಿ.ಘೋಷ್ ಅವರು ನಾಲ್ಕು ವರ್ಷಗಳ ಕಾಲ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಸೇವೆ ಸಲ್ಲಿಸಿ ಮೇ 2017ರಂದು ನಿವೃತ್ತರಾದರು. ಸದ್ಯ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎಂಎಚ್‌ಆರ್‌ಡಿ) ಸದಸ್ಯರಾಗಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ