ರೇವಂತ್ ರೆಡ್ಡಿಗೆ ಪಟ್ಟ ಕಟ್ಟಲು ತೆಲಂಗಾಣಕ್ಕೆ ಬರಲಿದ್ದಾರೆ ಸೋನಿಯಾ, ರಾಹುಲ್, ಖರ್ಗೆ
ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿದೆ. ಈ ಹಿನ್ನಲೆಯಲ್ಲಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಸೋನಿಯಾ, ರಾಹುಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಆಗಮಿಸಲಿದ್ದಾರೆ.
ಇಂದು ರೇವಂತ್ ರೆಡ್ಡಿ ಹೈದಾರಾಬಾದ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ನಿನ್ನೆಯೇ ದೆಹಲಿಗೆ ತೆರಳಿ ಸೋನಿಯಾ, ರಾಹುಲ್ ಮತ್ತು ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನವಿತ್ತಿದ್ದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳ ಪೈಕಿ ಕಾಂಗ್ರೆಸ್ 64 ಸ್ಥಾನ ಗೆದ್ದು ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿದೆ.