ದೇಶದ್ರೋಹ ಕಾಯ್ದೆಯನ್ನು ಪರಿಶೀಲನೆ : ಸುಪ್ರೀಂ ಕೋರ್ಟ್

ಮಂಗಳವಾರ, 10 ಮೇ 2022 (08:56 IST)
ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದ್ರೋಹ ಕಾಯ್ದೆಯನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ದೇಶದ ಸಾರ್ವಭೌಮತ್ವದ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾಯ್ದೆಯ ಪುನರ್ ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹದ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಬಾರದು ಎಂದು ಕೇಂದ್ರ ಅಫಿಡವಿಟ್ ಸಲ್ಲಿಸಿದೆ. 

ಬ್ರಿಟೀಷರ ಕಾಲದ ಕಾಯ್ದೆಗಳನ್ನು ಬದಿಗೆ ಸರಿಸಲು ಸರ್ಕಾರ ತೀರ್ಮಾನಿಸಲಾಗಿದೆ. ಇದರ ಭಾಗವಾಗಿ ಸಿಆರ್ಪಿಸಿಯಲ್ಲಿರುವ 124ಎ (ದೇಶದ್ರೋಹ) ಕಾಯ್ದೆಯನ್ನು ಪರಿಶೀಲನೆ ಮಾಡುತ್ತಿದ್ದೇವೆ.

ದೇಶದ್ರೋಹ ಕಾಯ್ದೆಗೆ ಸಂಬಂಧಿಸಿ ಹಲವು ವರ್ಗಗಳಿಂದ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಪರಿಗಣಿಸಿದ್ದಾರೆ. ಈ ಕಾಯ್ದೆಯ ದುರ್ಬಳಕೆ ಆಗುತ್ತಿರುವ ಬಗ್ಗೆಯೂ ಗಮನ ಹರಿಸಿದ್ದಾರೆ ಎಂದು ಕೇಂದ್ರ ಅಫಿಡವಿಟ್ನಲ್ಲಿ ಉಲ್ಲೇಖಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ