ಮುಂಬೈ : ನಾವು ಮಂತ್ರಿಗಳು, ಹಾಗಾಗಿ ಕಾನೂನು ಉಲಂಘಿಸುವ ಹಕ್ಕು ನಮಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಬುಡಕಟ್ಟು ಜನಾಂಗದವರ ಆರೋಗ್ಯಕ್ಕಾಗಿ ಯೋಜನೆಯನ್ನು ಉದ್ಘಾಟಿಸಿ.
ಈ ವೇಳೆ ಮಾತನಾಡಿದ ಅವರು, ಬಡವರ ಕಲ್ಯಾಣಕ್ಕಾಗಿ ಯಾವುದೇ ಕಾನೂನು ಅಡ್ಡಿಯಾಗುವುದಿಲ್ಲ. ಆ ಸಂದರ್ಭದಲ್ಲಿ 10 ಬಾರಿ ಬೇಕಾದರೂ ಕಾನೂನುಗಳನ್ನು ಉಲ್ಲಂಘಿಸಬಹುದು ಎಂದು ಮಹಾತ್ಮ ಗಾಂಧೀಜಿ ಹಿಂದೆ ಹೇಳಿದ್ದರು. ಹಾಗಾಗಿ ಕೆಲವೊಮ್ಮೆ ಜನರ ಅನುಕೂಲಕ್ಕಾಗಿ ಕಾನೂನನ್ನು ಉಲ್ಲಂಘಿಸುವ ಹಕ್ಕು ನಮಗಿದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಅಧಿಕಾರಿಗಳು ಹೇಳಿದಂತೆ ಸರ್ಕಾರ ನಡೆಸಲು ಸಾಧ್ಯವಿಲ್ಲ. ಜನರ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಾನೂನು ಉಲ್ಲಂಘನೆಯಾಗುತ್ತದೆ. ನಾವು ಹೇಳುವ ಯೋಜನೆಯನ್ನು ಅಧಿಕಾರಿಗಳು “ಹೌದು ಸರ್” ಎಂದು ಹೇಳಿ ಕಾರ್ಯರೂಪಕ್ಕೆ ತರಬೇಕು ಎಂದು ಎಚ್ಚರಿಕೆ ನೀಡಿದರು.