ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರ್‌ಜೆಡಿ ಶಾಸಕ

ಶನಿವಾರ, 13 ಫೆಬ್ರವರಿ 2016 (17:40 IST)
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ರಾಷ್ಟ್ರೀಯ ಜನತಾ ದಳದ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಯು-ಆರ್‌ಜೆಡಿ ಸರಕಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ ಮಾರನೇ ದಿನವೇ ನವಾಡಾ ಜಿಲ್ಲೆಯ ಆರ್‌ಜೆಡಿ ಶಾಸಕನ ಪ್ರಕರಣ ಬಹಿರಂಗವಾಗಿದೆ.
 
ಮಾಧ್ಯಮ ವರದಿಗಳ ಪ್ರಕಾರ, ನವಾಡಾ ವಿಧಾನಸಭಾ ಕ್ಷೇತ್ರದ ಆರ್‌ಜೆಡಿ ಶಾಸಕ ರಾಜ್‌ಬಲ್ಲಭ್ ಯಾದವ್, ನಳಂದಾ ಮೂಲದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
 
ಪೊಲೀಸ್ ಮಹಾನಿರ್ದೇಶಕರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಶಾಸಕನ ಬಂಧನಕ್ಕೆ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ