ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನ ದೇಶದ ಮೊದಲ ಲಿಂಗತ್ವ ಅಲ್ಪಸಂಖ್ಯಾತರ ಹೊರರೋಗಿ ವಿಭಾಗವನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಉದ್ಘಾಟಿಸಲಾಗಿದೆ.
ಈ ಮೂಲಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಆರೋಗ್ಯ ಕ್ಷೇತ್ರದಲ್ಲಿ ನೂತನ ಹೆಜ್ಜೆ ಇರಿಸಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಅಜಯ್ ಶುಕ್ಲಾ ಅವರು, ವೈದ್ಯಕೀಯ ಆರೈಕೆಯನ್ನು ಪಡೆಯುವಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಎದುರಿಸುವ ಸವಾಲುಗಳ ಬಗ್ಗೆ ಒತ್ತಿ ಹೇಳಿದರು.
ಈ ವಿಭಾಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ರೋಗಿಗಳಿಗೆ ಮೀಸಲಾದ ವಿಶ್ರಾಂತಿ ಕೊಠಡಿಯನ್ನು ಒದಗಿಸಲಾಗುತ್ತದೆ. ಅವರು ಯಾವುದೇ ಅತಂಕವಿಲ್ಲದೇ ಚಿಕಿತ್ಸೆ ಪಡೆಯುವ ವಾತಾವರಣ ಕಲ್ಪಿಸಲಾಗುತ್ತದೆ. ಸೂಕ್ತ ಚಿಕಿತ್ಸೆಯನ್ನು ಸಹ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.