ಹಿಂದೆ ರೈತರು ಭೂಮಿ ಕಳೆದುಕೊಂಡರೆ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ, ಪ್ರಧಾನಿ ಮೋದಿ ರೈತರ ಭೂಮಿ ಹೊರತಾಗಿಯೂ ಉದ್ಯೋಗ ಸೃಷ್ಟಿ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಳಿಯ ಅಥವಾ ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಇನ್ನುಮುಂದೆ ಸಾಧ್ಯವಿಲ್ಲ ಎಂದು ರಾಬರ್ಟ್ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಪರೋಕ್ಷ ವಾಗ್ದಾಳಿ ನಡೆಸಿದರು.
ಅಮೇಥಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಕೊಟ್ಟ ಮಾತಿನಂತೆ ಕ್ಷೇತ್ರದ ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಹೀಗಾಗಿಯೇ ರಾಹುಲ್ ಗಾಂಧಿ ಸಹ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದ ಗಾಂಧಿಗಳು ಹಿಂದೆಗಿಂತಲೂ ಹೆಚ್ಚು ಸಲ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.