ಅಮೇಠಿಯಲ್ಲಿ ಗಾಂಧಿ ಕುಟುಂಬದವರೇ ಸ್ಪರ್ಧಿಸಲಿ ಎಂದು ಜನ ಕೇಳ್ತಿದ್ದಾರೆ: ರಾಬರ್ಟ್ ವಾದ್ರಾ

Krishnaveni K

ಮಂಗಳವಾರ, 9 ಏಪ್ರಿಲ್ 2024 (11:04 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಿಂದ ಗಾಂಧಿ ಕುಟುಂಬದಿಂದ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆಗೆ ಪ್ರಿಯಾಂಕ ವಾದ್ರಾ ಪತಿ ರಾಬರ್ಟ್ ವಾದ್ರಾ ಪ್ರತಿಕ್ರಿಯಿಸಿದ್ದಾರೆ.

ಅಮೇಠಿಯಲ್ಲಿ ಸ್ಮೃತಿ ಇರಾನಿ ಅಭಿವೃದ್ಧಿ ಮಾಡಿಲ್ಲ ಎಂದು ಜನ ಹೇಳುತ್ತಿದ್ದಾರೆ. ಇಲ್ಲಿಂದ ಗಾಂಧಿ ಕುಟುಂಬದವರೇ ಯಾರಾದರೂ ಸ್ಪರ್ಧೆ ಮಾಡಲಿ ಎನ್ನುವುದು ಜನರ ಬಯಕೆ. ಆದರೆ ರಾಹುಲ್ ಗಾಂಧಿ ಈ ಬಾರಿ ಅಮೇಠಿಯಿಂದ ಸ್ಪರ್ಧೆ ಮಾಡುತ್ತಾರಾ ಎಂದು ನಾನು ಹೇಳಲಾರೆ. ಅದು ಅವರಿಗೆ ಬಿಟ್ಟಿದ್ದು ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ.

ಇನ್ನು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಬರ್ಟ್ ವಾದ್ರಾ, ಬಿಜೆಪಿ ಈ ಬಾರಿ 400 ಪ್ಲಸ್ ಸೀಟು ಗೆಲ್ಲಲಿದೆ ಎನ್ನುತ್ತಿದೆ. ಅದಕ್ಕಾಗಿ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ವಿಪಕ್ಷಗಳ ಸರ್ಕಾರವಿರುವ ರಾಜ್ಯಗಳಲ್ಲಿ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು, ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ರಾಬರ್ಟ್ ವಾದ್ರಾ, ಜನ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳಿವೆಯೇ ಎಂದು ಮಾತ್ರ ನೋಡುತ್ತಾರೆ.  ಕ್ಷುಲ್ಲುಕ ವಿಚಾರಗಳು ಅವರಿಗೆ ಬೇಕಾಗಿಲ್ಲ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ