ರಾಕೆಟ್ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ

ಬುಧವಾರ, 5 ಏಪ್ರಿಲ್ 2023 (11:03 IST)
ನವದೆಹಲಿ : ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಮರಳಿ ಭೂಮಿಗೆ ಲ್ಯಾಂಡ್ ಆಗುವ ರಾಕೆಟ್ ಅಭಿವೃದ್ಧಿ ಪಡಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಹತ್ವದ ಸಾಧನೆ ಮಾಡಿದೆ.

ಭಾನುವಾರ ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಲ್ಯಾಂಡಿಂಗ್ ಪರೀಕ್ಷೆ  ಯಶಸ್ವಿಯಾಗಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ಭಾರತ ಪ್ರಮುಖವಾದ ಮತ್ತೊಂದು ಸಾಧನೆಯನ್ನು ಮಾಡಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಜೊತೆಗೂಡಿ ಏಪ್ರಿಲ್ 2 ರಂದು ಮುಂಜಾನೆ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಮರುಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ ಆಟಾನಮಸ್ ಲ್ಯಾಂಡಿಂಗ್ ಮಿಷನ್ ಅನ್ನು ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದೆ.

ಭಾರತೀಯ ವಾಯುಪಡೆ ಚಿನೂಕ್ ಹೆಲಿಕಾಪ್ಟರ್ ಆರ್ಎಲ್ವಿ ಎತ್ತಿಕೊಂಡು ಬೆಳಗ್ಗೆ 7:10ರ ವೇಳೆಗೆ ಟೇಕ್ ಆಫ್ ಆಗಿದೆ. 4.5 ಕಿ.ಮೀ ಎತ್ತರದಲ್ಲಿ ಹೆಲಿಕಾಪ್ಟರ್ ಆರ್ಎಲ್ವಿಯನ್ನು ಬಿಡುಗಡೆ ಮಾಡಿದೆ. ಇಂಟಿಗ್ರೇಟೆಡ್ ನ್ಯಾವಿಗೇಷನ್, ಗೈಡೆನ್ಸ್ ಹಾಗೂ ಕಂಟ್ರೋಲ್ ಸಿಸ್ಟಮ್ ಅನ್ನು ಬಳಸಿಕೊಂಡು 7:40ರ ವೇಳೆಗೆ ಆರ್ಎಲ್ವಿ ಏರ್ಸ್ಟ್ರಿಪ್ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. 

ಒಂದು ವೇಳೆ ಬಾಹ್ಯಾಕಾಶದಿಂದ ರಾಕೆಟ್ ಬಂದರೆ ಯಾವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆಯೋ ಅಂಥದ್ದೇ ಪರಿಸ್ಥಿತಿಯಲ್ಲಿ ಮರು ಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಾಯತ್ತ ಲ್ಯಾಂಡಿಂಗ್ ಪರೀಕ್ಷೆಯನ್ನು ಕೈಗೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ