Rohit Sharma:ನಮ್ಮ ಕ್ಯಾಪ್ಟನ್ ಹಿಟ್ ಮ್ಯಾನ್ ಕಂಪ್ಲೀಟ್ ಫಿಟ್ ಮ್ಯಾನ್: ಕಾಂಗ್ರೆಸ್ ನಾಯಕಿ ಮೇಲೆ ಗುರ್ ಎಂದ ಬಿಸಿಸಿಐ

Sampriya

ಸೋಮವಾರ, 3 ಮಾರ್ಚ್ 2025 (15:52 IST)
Photo Courtesy X
ನವದೆಹಲಿ: ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಟೀ ಇಂಡಿಯಾ ನಾಯಕ  ರೋಹಿತ್ ಶರ್ಮಾ ಅವರ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಶಾಮಾ ಮೊಹಮ್ಮದ್ ಮಾಡಿದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಭಾನುವಾರ ದುಬೈನಲ್ಲಿ ನಡೆದ ಭಾರತದ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದಲ್ಲಿ ರೋಹಿತ್ ಶರ್ಮಾ 17 ಬಾಲ್‌ನಲ್ಲಿ 15ರನ್ ಗಳಿಸಿ ಔಟ್ ಆದ ಬಗ್ಗೆ ಕಾಂಗ್ರೆಸ್ ವಕ್ತಾರೆ ಶಮಾ ಹಂಚಿಕೊಂಡ ಪೋಸ್ಟ್ ಭಾರೀ ವಿವಾದ ಸೃಷ್ಟಿಸಿದೆ.   

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ರೋಹಿತ್ ಶರ್ಮಾ ಅವರ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಾಮಾ ಮೊಹಮ್ಮದ್ ಮಾಡಿದ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ.

ಈ ಕಾಮೆಂಟ್‌ಗಳು ಆಧಾರರಹಿತ ಮತ್ತು ಅವಹೇಳನಕಾರಿಯಾಗಿದೆ. ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಿರುವಾಗ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವಾಗ, ಟೀಮ್ ಇಂಡಿಯಾವನ್ನು ಬೆಂಬಲಿಸಬೇಕಾದ ಸಮಯ ಇದು ಎಂದು ಸೈಕಿಯಾ ಹೇಳಿದ್ದಾರೆ.

ಶಮಾ ಅವರ ಹೇಳಿಕೆಗೆ ಕಾಂಗ್ರೆಸ್ ಪಕ್ಷ ತರಾಟೆಗೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಶಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಅಳಿಸಿದ್ದಾರೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಇಂಡಿಯಾ ಟುಡೆಯೊಂದಿಗೆ ಮಾತನಾಡುತ್ತಾ, ರೋಹಿತ್ ಶರ್ಮಾ ಅವರನ್ನು ಸಮರ್ಥಿಸಿಕೊಂಡರು, ಅವರು ಫಿಟೆಸ್ಟ್ ಕ್ರಿಕೆಟಿಗರಲ್ಲಿ ಒಬ್ಬರು ಎಂದು ಒತ್ತಿ ಹೇಳಿದರು. ಶಾಮಾ ಮೊಹಮ್ಮದ್ ಅವರ ಹೇಳಿಕೆಗಳು ವೈಯಕ್ತಿಕ ಸಾಮರ್ಥ್ಯದಲ್ಲಿ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ