ರೋಹಿತ್ ವೆಮುಲು ಪ್ರಕರಣ: ಸ್ಮೃತಿ ಇರಾನಿ, ಬಂಡಾರು ದತ್ತಾತ್ರೇಯ್‌ಗೆ ಕ್ಲೀನ್ ಚಿಟ್

ಶನಿವಾರ, 20 ಫೆಬ್ರವರಿ 2016 (15:38 IST)
ಹೈದ್ರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ದಲಿತ ವಿದ್ಯಾರ್ಥಿಯಾಗಿದ್ದ ರೋಹಿತ್ ವೆಮುಲಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
 
ರೋಹಿತ್ ಆತ್ಮಹತ್ಯೆಗೆ ಇಬ್ಬರು ಸಚಿವರು ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ತೀವ್ರಗೊಂಡಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಕೇಂದ್ರ ಸರಕಾರ ಸತ್ಯಶೋಧನಾ ಸಮಿತಿ ರಚಿಸಿ ವರದಿ ನೀಡುವಂತೆ ಆದೇಶಿಸಿತ್ತು.
 
ರೋಹಿತ್ ವೆಮುಲಾ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿದ ಸತ್ಯಶೋಧನಾ ಸಮಿತಿ, ರೋಹಿತ್ ಆತ್ಮಹತ್ಯೆಗೆ ಇಬ್ಬರು ಸಚಿವರು ಕಾರಣರಲ್ಲ ಎಂದು ಕ್ಲೀನ್ ಚಿಟ್ ನೀಡಿ ಆರೋಪದಿಂದ ಮುಕ್ತಗಳಿಸಿದೆ.
 
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ ಮತ್ತು ಬಂಡಾರೂ ದತ್ತಾತ್ರೇಯ ರೋಹಿತ್ ಆತ್ಮಹತ್ಯೆಗೆ ಕಾರಣರಾಗಿದ್ದು, ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದರು.

ವೆಬ್ದುನಿಯಾವನ್ನು ಓದಿ