ಕೇರಳ ಚುನಾವಣೆ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 18.5 ಕೋಟಿ ರೂ ಹಣ ವಶ

ಮಂಗಳವಾರ, 26 ಏಪ್ರಿಲ್ 2016 (19:54 IST)
ಕೇರಳ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರಿಗೆ ನೀಡುವ ಹಣದ ಆಮಿಷಗಳು ಹೆಚ್ಚಾಗುತ್ತಿವೆ. ಚುನಾವಣೆಯಲ್ಲಿ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ 18.5 ಕೋಟಿ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು 32 ಜನ ಆರೋಪಿಗಳನ್ನು ಬಂಧಿಸಿದ್ದಾರೆ. 
 
ಕೇರಳದಲ್ಲಿ ಮೇ 16 ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಮೇ 19 ರಂದು ಚುನಾವಣೆ ಫಲಿತಾಂಶ ಹೊರಬೀಳಲಿದೆ. ಹಣ ಮಧ್ಯ ಪ್ರಾಚ್ಯ ರಾಷ್ಟ್ರದಿಂದ ಬಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
 
ಹಣದ ಮೂಲವನ್ನು ಪತ್ತೆ ಹಚ್ಚಲು ತನಿಖಾ ತಂಡಗಳನ್ನು ರಚಿಸಲಾಗಿದೆ. ಮಧ್ಯಪ್ರಾಚ್ಯ ಅಥವಾ ನೆರೆ ರಾಷ್ಟ್ರಗಳಿಂದ ಹಣ ಬಂದಿರುವ ಸಾಧ್ಯತೆಗಳಿವೆ ಎಂದು ಡಿಐಜಿ ಪಿ.ವಿಜಯನ್ ತಿಳಿಸಿದ್ದಾರೆ.
 
ಹಣವನ್ನು ಸಾಗಿಸುತ್ತಿರುವಾಗ ಸ್ಪಷ್ಟ ಮಾಹಿತಿ ನೀಡಿದಲ್ಲಿ ಅಂತಹ ಹಣವನ್ನು ವಶಪಡಿಸಿಕೊಳ್ಳುವುದಿಲ್ಲ. ಅಸ್ಪಷ್ಟ ಮಾಹಿತಿ ನೀಡಿದಲ್ಲಿ ಅಂತಹ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ವಿಜಯನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ