ಆರೆಸ್ಸೆಸ್, ವಿಎಚ್‌ಪಿ, ಶಿವಸೇನೆ ಹತ್ಯೆಗೆ ಉಗ್ರರ ಸ್ಕೇಚ್ ಬಹಿರಂಗ

ಮಂಗಳವಾರ, 29 ನವೆಂಬರ್ 2016 (12:19 IST)
ಪಂಜಾಬ್‌ನ ನಾಭಾ ಜೈಲಿನಿಂದ ಪರಾರಿಯಾಗಿದ್ದ ಖಲಿಸ್ತಾನ್ ಲಿಬರೇಶನ್ ಫ್ರಂಟ್ ಮುಖ್ಯಸ್ಥ ಹರ್ಮಿಂದರ್ ಸಿಂಗ್ ಮಿಂಟೂನನ್ನು ನಿಜಾಮುದ್ದೀನ್ ರೈಲ್ವೆ ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದು, ವಿಧಾನಸಭೆ ಚುನಾವಣೆಗಳು ನಡೆಯಲಿರುವ ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗುವ ಸಂಚು ರೂಪಿಸಲಾಗಿತ್ತು ಎನ್ನುವುದು ಬೆಳಕಿಗೆ ಬಂದಿದೆ. 
 
ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯಿಬಾ ಮತ್ತು ಕೆಎಲ್‌ಎಫ್ ಸಂಘಟನೆಗಳ ನೆರವಿನಿಂದ ಉಗ್ರರು ಆರೆಸ್ಸೆಸ್, ವಿಎಚ್‌ಪಿ ಮತ್ತು ಶಿವಸೇನೆ ನಾಯಕರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದರು ಎನ್ನಲಾಗಿದೆ.  
 
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ. 
 
ನಾಭಾ ಜೈಲಿನಿಂದ ಅಪರಾಧಿಗಳನ್ನು ಪರಾರಿಯಾಗಿಸುವ ಹಿಂದಿನ ಮಾಸ್ಟರ್ ಮೈಂಡ್ ಪರಮಿಂದರ್ ಸಿಂಗ್‌ನನ್ನು ನಿನ್ನೆ ರಾತ್ರಿ ಉತ್ತರಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ