ಏರ್‌ಲೈನ್ಸ್‌ನ ಗಗನಸಖಿಯೊಂದಿಗೆ ಅಸಭ್ಯ ವರ್ತನೆ

ಭಾನುವಾರ, 24 ಜುಲೈ 2022 (14:35 IST)
ಚಂಡೀಗಢ : ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಗಗನಸಖಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ.

ಮೊಹಮ್ಮದ್ ಡ್ಯಾನಿಶ್ ಬಂಧಿತ ವ್ಯಕ್ತಿ. ಶ್ರೀನಗರದಿಂದ ಲಕ್ನೋಕ್ಕೆ ಅಮೃತಸರ ಮಾರ್ಗವಾಗಿ ಹೋಗುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಕ್ನೋ ನಿವಾಸಿಯಾದ ಮೊಹಮ್ಮದ್ ಎಂಬಾತ ಗಗನಸಖಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಅಷ್ಟೇ ಅಲ್ಲದೇ ಅಸಭ್ಯವಾಗಿ ವರ್ತಿಸಿದ್ದಾನೆ. 

ಘಟನೆಗೆ ಸಂಬಂಧಿಸಿದಂತೆ ಗಗನಸಖಿಯು ಕ್ಯಾಪ್ಟನ್ಗೆ ತಿಳಿಸಿದ್ದಾರೆ. ಅವರು ಅಮೃತಸರ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ