ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಅಡಳಿತ ಹೇರಿಕೆ?

ಸೋಮವಾರ, 10 ಜೂನ್ 2019 (17:53 IST)
ಪಶ್ಚಿಮ ಬಂಗಾಳದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ವರದಿ ನೀಡುತ್ತಿದ್ದಂತೆ ರಾಜ್ಯದಲ್ಲಿ ರಾಷ್ಟ್ರಪತಿ ಅಡಳಿತ ಹೇರುವಂತೆ ಬಿಜೆಪಿ ಒತ್ತಾಯಿಸಿದೆ.
ಪಶ್ಚಿಮ ಬಂಗಾಳ ಸರಕಾರ ಬಂದೂಕು, ರಿವಾಲ್ವರ್ ಮತ್ತು ಬಾಂಬ್‌ಗಳಿಂದ ಅಧಿಕಾರ ನಡೆಸುತ್ತಿದೆ. ಒಂದು ವೇಳೆ ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಕೇಂದ್ರ ಸರಕಾರ ಪಶ್ಚಿಮ ಬಂಗಾಳ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಅಡಳಿತ ಹೇರುವುದು ಸೂಕ್ತ ಎಂದು ರಾಜ್ಯ ಉಸ್ತುವಾರಿ ಕೈಲಾಶ್ ವಿಜಯ ವರ್ಗಿಯ ಗುಡುಗಿದ್ದಾರೆ.
 
ಲೋಕಸಭೆ ಚುನಾವಣೆಯಲ್ಲಿನ ಸೋಲಿಗೆ ಸೇಡು ತೀರಿಸಿಕೊಳ್ಳುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಮಮತಾ ನೇರ ಹೊಣೆ ಎಂದು ಆರೋಪಿಸಿದ್ದಾರೆ.
 
ಬಿಜೆಪಿ ಆರೋಪಗಳಿಗೆ ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿನ ಹಿಂಸಾಚಾರಕ್ಕೆ ಬಿಜೆಪಿ ನೇರ ಹೊಣೆಯಾಗಿದೆ. ನಮ್ಮ ಯಾವುದೇ ಕಾರ್ಯಕರ್ತರು ಹಿಂಸಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ