ಹರಿಯಾಣದ ಸಿಎಂ ಆಗಿ ಸೈನಿ ಇದೇ 17ರಂದು ಪ್ರಮಾಣ ವಚನ: ಪ್ರಧಾನಿ ಮೋದಿ ಭಾಗಿ

Sampriya

ಶನಿವಾರ, 12 ಅಕ್ಟೋಬರ್ 2024 (14:18 IST)
Photo Courtesy X
ಚಂಡೀಗಢ: ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ನೈಬ್ ಸಿಂಗ್ ಸೈನಿ ಅವರು ಅಕ್ಟೋಬರ್ 17 ರಂದು ಎರಡನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.‌

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳೊಂದಿಗೆ ದೊಡ್ಡ ಗೆಲುವು ದಾಖಲಿಸಿದೆ. ರಾಜ್ಯದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ.  

‌ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಬಿಜೆಪಿಯ ಎಲ್ಲಾ ಹಿರಿಯ ನಾಯಕರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  

ನೈಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀರಾ ಗ್ರೌಂಡ್ ಸೆಕ್ಟರ್ 5 ಪಂಚಕುಲದಲ್ಲಿ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಸರಿಯಾಗಿ ನೂತನ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮದ ಸಮಯ ನಿಗದಿ ಮಾಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಹಾಗೂ ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ಅಕ್ಟೋಬರ್ 17 ರಂದು ಪಂಚಕುಲದಲ್ಲಿ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕರಿಸಲು ನಾವು ಪ್ರಧಾನಿಯವರ ಅನುಮೋದನೆಯನ್ನು ಪಡೆದಿದ್ದೇವೆ ಎಂದು ಹೇಳಿದ್ದಾರೆ.

ನೂತನ ಸಿಎಂ ನೈಬ್ ಸಿಂಗ್ ಸೈನಿ ಕೂಡ ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಿದ್ಧತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಕಾರ್ಯ ನಿರತವಾಗಿದೆ.

ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ನೈಬ್ ಸಿಂಗ್ ಸೈನಿ ಅವರು ಕಳೆದ ಮಾರ್ಚ್‌ನಲ್ಲಿ ಸಿಎಂ ಸ್ಥಾನವನ್ನು ವಹಿಸಿಕೊಂಡಿದ್ದರು. ಹೀಗಾಗಿ ಸೈನಿ ಅವರು ರಾಜ್ಯದ ಮುಖ್ಯಮಂತ್ರಿಯಾಗುತ್ತಿರುವುದು ಇದು ಎರಡನೇ ಬಾರಿ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ