ಕರಡಿವೇಷ ಧರಿಸಿ ಓಡಾಡಿದ್ರೆ ತಿಂಗಳ ವೇತನ!

ಶನಿವಾರ, 2 ಏಪ್ರಿಲ್ 2022 (07:56 IST)
ತೆಲಂಗಾಣ : ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ರೈತರು ತಮ್ಮ ಬೆಳೆಯನ್ನು ಮಂಗಗಳು ಮತ್ತು ಕಾಡುಹಂದಿಗಳಿಂದ ರಕ್ಷಿಸಲು ವಿಶಿಷ್ಟ ಉಪಾಯವೊಂದನ್ನು ಮಾಡಿದ್ದಾರೆ.

ವ್ಯಕ್ತಿಯೊಬ್ಬನಿಗೆ ಕರಡಿ ವೇಷ ಹಾಕಿ ತಮ್ಮ ಹೊಲದಲ್ಲಿ ನಿಲ್ಲಿಸುವ ಮೂಲಕ ಅವರು ಕೋತಿಗಳಿಂದ ಬೆಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ.

ತೆಲಂಗಾಣದ ಸಿದ್ದಿಪೇಟೆಯ ಕೋಹೆಡದ ರೈತ ಭಾಸ್ಕರ್ ರೆಡ್ಡಿ ಕೋತಿಗಳು ಮತ್ತು ಕಾಡುಹಂದಿಗಳು ಬೆಳೆ ಹಾನಿ ಮಾಡುವುದನ್ನು ತಡೆಯಲು ಕರಡಿಯ ವೇಷ ಧರಿಸಿ ಹೊಲದಲ್ಲಿ ಓಡಾಡಲು ವ್ಯಕ್ತಿಯನ್ನು ನೇಮಿಸಿದ್ದಾರೆ.

ಈ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಷ್ಟೇ ಅಲ್ಲದೆ, ಕರಡಿ ವೇಷ ಧರಿಸಿ ಓಡಾಡುವ ವ್ಯಕ್ತಿಗೆ ದಿನಕ್ಕೆ 500 ರೂ. ವೇತನವನ್ನೂ ನಿಗದಿ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ